(ನ್ಯೂಸ್ ಕಡಬ) newskadaba.com ನ. 14. ಬಾಲ ಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲೆ ಇದರ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಪ್ರಯುಕ್ತ 09ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಕದ್ರಿ ಜಿಲ್ಲಾ ಬಾಲ ಭವನದಲ್ಲಿ ಮಂಗಳವಾರದಂದು ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ವಾದ್ಯ ಸಂಗೀತ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ, ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಈ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಪ್ರತಿಭಾವಂತ ಮಕ್ಕಳು ಎಲ್ಲಾ ಚಟುವಟಿಕೆಗಳಿಗೆ ಭಾಗವಹಿಸಿರುತ್ತಾರೆ.
ಸೃಜನಾತ್ಮಕ ಪ್ರದರ್ಶನ ಕಲೆ ವಿಭಾಗದಲ್ಲಿ ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸೃಷ್ಠಿ ಎನ್.ಎ – ಪ್ರಥಮ, ಎಸ್.ಡಿ.ಎಮ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಧರ್ಮಸ್ಥಳ ಶಾಲೆಯ ಪ್ರಾಪ್ತಿ ಶೆಟ್ಟಿ – ದ್ವಿತೀಯ, ರೋಟರಿ ಪ್ರೌಢಶಾಲೆ ಮಿತ್ತಡ್ಕ ಶಾಲೆಯ ಅನುಷ್ಕಾ ಕೆ.ಆರ್ – ತೃತೀಯ.
ವಾದ್ಯ ಸಂಗೀತ ವಿಭಾಗದಲ್ಲಿ ಚಿನ್ಮಯ ಪೌಢಶಾಲೆ ಕದ್ರಿ ಮಂಗಳೂರು, ಕೀರ್ತನ ನಾಯಕ್ – ಪ್ರಥಮ, ಸ್ನೇಹ ಪ್ರೌಢಶಾಲೆ ಸುಳ್ಯ, ಅಪ್ರಮೇಯ – ದ್ವಿತೀಯ, ಎಸ್‍ಡಿಎಮ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಧರ್ಮಸ್ಥಳ, ಆದರ್ಶ ಹೆಚ್.ವೈ – ತೃತೀಯ.
ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ ವಿಭಾಗದಲ್ಲಿ ಎಸ್‍ಡಿಎಮ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಧರ್ಮಸ್ಥಳ, ಸಚಿತ್ ಭಟ್ -ಪ್ರಥಮ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು, ಸಮೃಧ್ ಆರ್. ಶೆಟ್ಟಿ – ದ್ವಿತೀಯ, ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸುಬ್ರಹ್ಮಣ್ಯ, ಅದಿತ್ ಬಿ. – ತೃತೀಯ.
ಚಿತ್ರಕಲೆ ವಿಭಾಗದಲ್ಲಿ ಬಾಲಕರ ಬಾಲಮಂದಿರ ಬೋಂದೆಲ್, ರೋಹನ್ ಮೋದಿ- ಪ್ರಥಮ, ಸಂತ ಜೋಸೆಫ್ ಪ್ರೌಢಶಾಲೆ ಸುಳ್ಯ, ಅನೀಂದೃತ – ದ್ವಿತೀಯ, ಸಂತ ಜೆರೋಸಾ ಪ್ರೌಢಶಾಲೆ ಜೆಪ್ಪು ಇಝ್ಮಾ ಫಾತಿಮಾ – ತೃತೀಯ ಸ್ಥಾನಗಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳು ಬಾಲಭವನ, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿರುತ್ತಾರೆ.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರೆನ್ನಿ ಡಿಸೋಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ ಎಮ್ ಉಪಸ್ಥಿತರಿದ್ದರು.