ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ.23. ದಕ್ಷಿಣ ಭಾರತದ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದ ಅಪರಿಚಿತ ಯಾತ್ರಾರ್ಥಿಯೋರ್ವರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದವರೆಂದು ಗುರುತಿಸಲಾಗಿದ್ದು, ಇವರು ತೀವ್ರ ತರದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರದಂದು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Scroll to Top