ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಿದ್ದು, ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಅಪಾರ್ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ.

ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಮಾದರಿಯ ವಿಶಿಷ್ಟ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಶಿಕ್ಷಣದ ಸಮಗ್ರ ಮಾಹಿತಿ ಹೊಂದಿರುವ ವ್ಯವಸ್ಥೆಯಡಿ ಮಕ್ಕಳಿಗೂ ವಿಶಿಷ್ಟ ಗುರುತಿನ ಸಂಖ್ಯೆಯ ಗುರುತಿನ ಚೀಟಿಯನ್ನು ನೀಡಲಾಗುವುದು.

Also Read  ಉಳ್ಳಾಲ: ಯುವತಿಯ ಮಾನಭಂಗಕ್ಕೆ ಯತ್ನ ➤ ಉ.ಪ್ರದೇಶದ ಕಾರ್ಮಿಕನ ಬಂಧನ

ಅಪಾರ್ ಗುರುತಿನ ಚೀಟಿಗೆ ವಿದ್ಯಾರ್ಥಿಗಳ ಹೆಸರು ನೋಂದಣಿ ಮಾಡುವ ಮುನ್ನ ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಇದಕ್ಕಾಗಿ ಪೋಷಕರ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಡ್ರೈವಿಂಗ್ ಲೈಸೆನ್ಸ್ ಜೋಡಿಸಿ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮಾಡಲಾಗುವುದು.

ಈಗಾಗಲೇ ವಿದ್ಯಾರ್ಥಿಗಳ ಹೆಸರು ನೋಂದಣಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಸ್ವಯಂ ಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ ‘ಅಪಾರ್’ ಸಂಕ್ಷಿಪ್ತ ರೂಪವಾಗಿದ್ದು, ಇದನ್ನು ಆಧಾರ್ ಕಾರ್ಡ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಇದು ವಿದ್ಯಾರ್ಥಿಯ ಜೀವಮಾನದ ಗುರುತಿನ ಸಂಖ್ಯೆಯಾಗಿರುತ್ತದೆ. ಇದರಲ್ಲಿ ವಿದ್ಯಾರ್ಥಿಯ ಎಲ್ಲಾ ಶೈಕ್ಷಣಿಕ ಮಾಹಿತಿ ದಾಖಲಾಗಿರುತ್ತದೆ. ಪೂರ್ವ ಪ್ರಾಥಮಿಕ ಶಾಲೆಯಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಪ್ರತಿ ವಿದ್ಯಾರ್ಥಿಗಳಿಗೆ ಈ ಕಾರ್ಡ್ ವಿತರಿಸಲಿದ್ದು, ಹೆಸರು, ವಿಳಾಸ, ಜನ್ಮದಿನ, ಭಾವಚಿತ್ರ ಸೇರಿ ಸಂಪೂರ್ಣ ಮಾಹಿತಿಗಳು ಡಿಜಿಟಲ್ ರೂಪದಲ್ಲಿರಲಿದ್ದು, ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಇದನ್ನು ಬಳಕೆ ಮಾಡಲಾಗುವುದು ಎಂದು ಹೇಳಲಾಗಿದೆ.

error: Content is protected !!
Scroll to Top