ಶಾಲೆಯಿಂದ ತಪ್ಪಿಸಿಕೊಂಡ 4 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com . 14. ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು ಅವರನ್ನು ಆರ್.ಪಿ.ಎಫ್. ಪೊಲೀಸರು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ.

ನಗರದ ಗಾಡಿಕೊಪ್ಪದ ಸರಕಾರಿ ಶಾಲೆಯಲ್ಲಿ ಒಂದು, ಮೂರು ಮತ್ತು ಏಳನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ಕಾಮಾಕ್ಷಿಪುರದ ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ಆರ್.ಪಿ.ಎಫ್ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ತಮಗೆ ಶಾಲೆಗೆ ಹೋಗಲು ಇಷ್ಟವಿಲ್ಲ, ಕೆಲಸ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಪುತ್ತೂರು: ಹಿತ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

 

 

error: Content is protected !!
Scroll to Top