’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com . 14. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಪಂಡಿತ್ ಜವಾಹರ್‌ ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು . ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು ಎಂದರು.

Also Read  ಉಪ್ಪಿನಂಗಡಿ: ವಕೀಲರ ಕಛೇರಿ ಶುಭಾರಂಭ

 

 

error: Content is protected !!
Scroll to Top