ಮುಡಾ ಹಗರಣ: ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com . 14. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನವೆಂಬರ್‌ 23ರಂದು ವಿಚಾರಣೆ ನಡೆಸಲಿದೆ.

Also Read  'ಮನ್ಮುಲ್ ಅಧ್ಯಕ್ಷ'ರಾಗಿ ಕಾಂಗ್ರೆಸ್ ನ 'ಬಿ.ಬೋರೇಗೌಡ' ಆಯ್ಕೆ

 

error: Content is protected !!
Scroll to Top