ಮನೆಯಲ್ಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ

(ನ್ಯೂಸ್ ಕಡಬ) newskadaba.com . 14. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸುಮಾರು 250ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಮದ್ಯದ ಮೌಲ್ಯ ಲಕ್ಷಾಂತರ ರೂಪಾಯಿ ಆಗಿರುತ್ತದೆ. ಆರೋಪಿಗಳು ಗೋವಾದಿಂದ ಕಡಿಮೆ ಬೆಲೆಗೆ ಮದ್ಯವನ್ನು ತರಿಸಿಕೊಂಡು ಮನೆಯಲ್ಲಿಯೇ ಸಂಗ್ರಹಿಸಿಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.

Also Read  ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ

 

error: Content is protected !!
Scroll to Top