ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ ಅನುದಾನ ಬಿಡುಗಡೆ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಉಳ್ಳಾಲ, . 15. ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ, ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ಅರುವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆಯೆಂದು ವಿದಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಅವರು ಉಳ್ಳಾಲ ನಗರಸಭಾ ವ್ಯಾಪ್ತಿಯ ಕೆರೆಬೈಲ್ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಾಂಕ್ರಿಟ್ ರಸ್ತೆ ಮತ್ತು ತಡೆಗೋಡೆ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಕೆರೆಬೈಲ್ ಕೊರಗಜ್ಜ ಕ್ಷೇತ್ರದ ಅಧ್ಯಕ್ಷರಾದ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

Also Read  ಅನುಮತಿ ಇಲ್ಲದೇ ಡಿಜೆ; ವಿಜಯೋತ್ಸವ - ಪುತ್ತಿಲ ಪರಿವಾರ ವಿರುದ್ದ ದೂರು ದಾಖಲು

 

error: Content is protected !!
Scroll to Top