ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, . 15. ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ಹಿಂದಿನ ಸಾಲಿನಲ್ಲಿ ಸುಮಾರು 1,000 ಕೋಟಿ ರೂ. ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2,100 ಕೋಟಿ ರೂಪಾಯಿ ಬೆಳೆ ವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Scroll to Top