(ನ್ಯೂಸ್ ಕಡಬ) newskadaba.com ನ. 14. ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ರಚಿಸಿ ಜನರಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜಸ್ಥಾನ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ. ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ. ನಕಲಿ ಫೇಸ್ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Also Read ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿದ ಯುವಕ ನಾಪತ್ತೆ ➤ ಹುಡುಕಾಟಕ್ಕೆಂದು 5 ತಂಡಗಳ ರಚನೆ