ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ – News Kadaba

ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15. ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿ ಸಮೂಹವು ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ  ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ಕಾಲೇಜಿನಿಂದ ಪ್ರತಿಭಟನೆಗೆ ಆಗಮಿಸಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಬಸ್ ಮೂಲಕ ತಂಡೋಪತಂಡವಾಗಿ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ತಡೆಹಿಡಿಯಲಾಗಿತ್ತು. ಆರಂಭದಲ್ಲಿ ಕಚೇರಿ ಎದುರಿನ ರಸ್ತೆಯಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಬಳಿಕ ಬ್ಯಾರಿಕೇಡ್ ತಳ್ಳಿ ಒಳ ನುಗ್ಗಿದ ಪ್ರತಿಭಟನಾಕಾರರು ಆಡಳಿತ ಕಚೇರಿಯ ಒಳಗೆ ನುಗ್ಗಲು ವಿದ್ಯಾರ್ಥಿಗಳು ಪ್ರಯತ್ನಿಸಿದ್ದಾರೆ.

ಈ ಸಂದರ್ಭ ವಿದ್ಯಾರ್ಥಿಗಳು ಒಳ ಹೋಗದಂತೆ ಪೊಲೀಸರು ತಡೆಯೊಡ್ಡಿದ್ದಾರೆ. ಈ ನಡುವೆ ನೂಕಾಟ ತಳ್ಳಾಟಗಳ ನಡುವೆ ವಿ.ವಿ ಆಡಳಿತ ಕಚೇರಿಯ ಪ್ರವೇಶ ದ್ವಾರದ ಗಾಜು ಪುಡಿಯಾಗಿದೆ. ಓರ್ವ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಜಿನ ಪೀಸ್ ತಗಲಿ ಗಾಯವಾಗಿದೆ. ಇದೇ ವೇಳೆ ಓರ್ವ ವಿದ್ಯಾರ್ಥಿ ಕೈಗೂ ಗಾಜಿನ ಪೀಸ್ ತಾಗಿದೆ. ಘಟನೆಯಿಂದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ವಿವಿ ಉಪಕುಲಪತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿ ಉಪಕುಲಪತಿ ಪಿ.ಎಲ್.ಧರ್ಮ ಆಕ್ರೋಶ ವ್ಯಕ್ತಪಡಿಸಿ ಕಾಲೇಜಿನ ಸ್ವತ್ತಿಗೆ ಹಾನಿ ಎಸಗಿರೋದು ಒಳ್ಳೆಯ ನಡೆ ಅಲ್ಲ. ಇಂಥಹ ಪ್ರವೃತ್ತಿಯನ್ನು ನಾವು ಯಾವುದೇ ಕಾರಣಕ್ಕೆ ಸಹಿಸಲ್ಲ. ಶಾಂತಿಯುತ ಪ್ರತಿಭಟನೆ ಹೆಸರಲ್ಲಿ ಇಂಥದ್ದು ಮಾಡಬೇಡಿ ಅಂತ ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದ ಉಪಕುಲಪತಿ ಬಳಿಕ ವಿದ್ಯಾರ್ಥಿಗಳಿಗೆ ವಿವಿ ಸಮಸ್ಯೆ ಬಗ್ಗೆ ವಿವರಣೆಯನ್ನು ನೀಡಿದ್ದಾರೆ.

Scroll to Top