ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, . 15. ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೋಲಿಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ.

ಹಿಂದು ಸೇವಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾ.ಸಂಜಯ ಕುಮಾರ ಅವರ ಪೀಠವು,ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನವಾಗಿದೆ ಎಂದು ಸ್ಪಷ್ಟಪಡಿಸಿತು.

Also Read  ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

error: Content is protected !!
Scroll to Top