(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು
