ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com . 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಅವರಿಗೆ ಹೂಟ್ಟೂರು ಸನ್ಮಾನ ನೆರವೇರಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಚಿತ್ರಕೂಟದ ವೈದ್ಯ ಡಾ. ರಾಜೇಶ್ ಬಾಯರಿ, ಧಾರ್ಮಿಕ ಮುಖಂಡ ವಂಡಬಳ್ಳಿ ಜಯರಾಮ್ ಶೆಟ್ಟಿ, ಡಾ. ಅತುಲ್ ಕುಮಾರ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ, ಬ್ರಹ್ಮಾವರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ವಂಡ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವಿರಾಜ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಉದಯ ಪೂಜಾರಿ, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ನಿರ್ಮಾಲ ಪ್ರಭಾಕರ ಆಚಾರ್ಯ ಚಿತ್ತೂರು ಮೊದಲಾದವರು ಉಪಸ್ಥಿತರಿದ್ದರು.

Also Read  ಕೊಯಿಲ ಗ್ರಾಮ ಪಂಚಾಯತ್ ಸದಸ್ಯ ವಿಷ ಸೇವಿಸಿ ಆತ್ಮಹತ್ಯೆ

 

error: Content is protected !!
Scroll to Top