(ನ್ಯೂಸ್ ಕಡಬ) newskadaba.com ನ. 16. ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಅಡ್ಡಲಾಗಿ 6.50 ಕೋಟಿ ರೂಪಾಯಿ ವೆಚ್ಚದ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನಸೌಂದತ್ತಿ ಸೇತುವೆ-ಕಮ್-ಬ್ಯಾರೇಜ್ ಉದ್ಘಾಟನೆಗೊಂಡು ಮೂರು ತಿಂಗಲಾಗುತ್ತಿದ್ದಂತೆ ಕುಸಿದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಸಂಪರ್ಕವನ್ನು ಮರುಸ್ಥಾಪಿಸಲು ತಕ್ಷಣ ದುರಸ್ತಿ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಗಾಯೋಗೋಳ್ ಒತ್ತಾಯಿಸಿದ್ದಾರೆ. ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ಅಥಣಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ ಎಸ್ ಲಮಾಣಿ ಮಾತನಾಡಿ, ಸಂತ್ರಸ್ತ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಶೀಘ್ರವೇ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.