ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com . 16. ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.

ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆ ತಡೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Also Read  ಮರ್ಧಾಳದಲ್ಲಿ ಮದ್ಯದಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ► ವಾರದೊಳಗೆ ಅನುಮತಿ ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

 

error: Content is protected !!
Scroll to Top