ಚಾಕುವಿನಿಂದ ಇರಿದು ಯುವಕನ ಹತ್ಯೆ..!

(ನ್ಯೂಸ್ ಕಡಬ) newskadaba.com . 16. ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ರಿಷಾಬ್ ಪಾಷ (20) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಯುವಕ ಮೃತಪಟ್ಟಿದ್ದಾನೆ. ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಘಟನೆ ನಡೆದಿದ್ದು, ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

Also Read  ಕಾವೇರಿ ನದಿ ನೀರು ವಿವಾದ - ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ

 

error: Content is protected !!
Scroll to Top