ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com . 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Also Read  ಎಂಡಿಎಂಎ ಮಾದಕವಸ್ತು ಮಾರಾಟ - ಆರೋಪಿ ಸೆರೆ

 

error: Content is protected !!
Scroll to Top