ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com . 16.  ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ.

ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಮಧ್ಯಾಹ್ನ 2 ಗಂಟೆಗೆ ವಿಶೇಷ ಆಕರ್ಷಣೆಯಾಗಿ ಹೆಸರಾಂತ ಕಲಾವಿದರಿಂದ ದಿ.ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಮಾನಿಷಾದದ ಭಾಗ ‘ಸೀತಾ ಪರಿತ್ಯಾಗ’ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಸತೀಶ್ ಅಡಪ, ರಾಜೇಶ್ ಕುಳಾಯಿ, ವಿಜಯಕುಮಾರ್ ಶೆಟ್ಟಿ, ಕೃಷ್ಣಪ್ಪ ಪೂಜಾರಿ ಕಿನ್ಯಾ, ಗುರುರಾಜ ಭಟ್, ಕೊಪ್ಪಲ ಮೋಹನ ಕದ್ರಿ ಉಪಸ್ಥಿತರಿದ್ದರು.

Also Read  ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

 

error: Content is protected !!
Scroll to Top