12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com . 16.  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್‌-ರಾಮ ದಂಪತಿ ಪುತ್ರಿ ನಿವೃತ್ತಿ ಮೊದಲ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ನಿವೃತ್ತಿ ದಿಢೀರ್ ಕುಸಿದು ಬಿದ್ದಳು. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ನಿವೃತಿ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ನಿವೃತಿ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವುದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ

Also Read  ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..!

 

 

error: Content is protected !!
Scroll to Top