ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ.

ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ ಸೇತುವೆ ಸಾಗರ್ ಹಾಲ್ ಗಿಂತ ಮೊದಲು ತಲುಪುವ ಭಾಗ ವಾಹನ ಸವಾರರು ಜಾಗರೂಕರಾಗಿರಬೇಕಾಗಿದ್ದು, ವೇಗಕ್ಕೆ ಕಡಿವಾಣ ಹಾಕುವ ಅಗತ್ಯವಿದೆ.

Also Read  ಮಂಗಳೂರು: ಸೌದಿ ಅರೇಬಿಯಾದಲ್ಲಿ ಅಪಘಾತ..! ➤ ಕರಾವಳಿ ಮೂಲದ ಯುವಕ ಮೃತ್ಯು

 

error: Content is protected !!
Scroll to Top