ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 18. ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ. ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು ನಡೆಸಲು ಯೋಜಿಸಿದೆ. ಮೂಲಗಳ ಪ್ರಕಾರ 190 ಮೈಲುಗಳವರೆಗೆ (306 ಕಿಮೀ) ವ್ಯಾಪ್ತಿಯನ್ನು ಹೊಂದಿರುವ ಎಟಿಎಸಿಎಂಎಸ್ ರಾಕೆಟ್‌ಗಳನ್ನು ಬಳಸಿಕೊಂಡು ಉಕ್ರೇನ್ ಮೊದಲ ದಾಳಿಯನ್ನು ನಡೆಸುವ ಸಾಧ್ಯತೆಯಿದೆ.

Also Read  ಮಂಗಳೂರು ವಿಶ್ವವಿದ್ಯಾನಿಲಯ: ಸಂಶೋಧನಾ ಕಾರ್ಯಕ್ಕೆ ಅರ್ಜಿ ಆಹ್ವಾನ

 

 

error: Content is protected !!
Scroll to Top