ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ನ. 18.  ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

* ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ

* ಹುದ್ದೆಗಳು : ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್, ಸಹಾಯಕ ಸಬ್ ಇನ್ಸ್‌ಪೆಕ್ಟರ್ , ಹೆಡ್ ಕಾನ್ಸ್ಟೇಬಲ್

* ಖಾಲಿ ಹುದ್ದೆಗಳ ಸಂಖ್ಯೆ: 164

* ಉದ್ಯೋಗ ಸ್ಥಳ : ಭಾರತದಾದಂತ್ಯ

ಶೈಕ್ಷಣಿಕ ಅರ್ಹತೆ:

* ಎನ್‌ಐಎ ಮಾನದಂಡಗಳ ಪ್ರಕಾರ ಇನ್ಸ್ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿಗಳು ಪದವಿ ಪಡೆದಿರಬೇಕು.

* ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೂ ನಿಗದಿತ ವಿಭಾಗದಲ್ಲಿ ಪದವಿ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು.

Also Read  ಪಿಯುಸಿ ಪಾಸ್ ಆದವರಿಗೆ ಕಡಬದಲ್ಲಿದೆ ಹಲವು ಉದ್ಯೋಗಗಳು‌ - ನಿಮಗಾಗಿ ಕಾಯುತ್ತಿವೆ ಉತ್ತಮ ವೇತನದ ಉದ್ಯೋಗಗಳು

ವಯಸ್ಸಿನ ಮಿತಿ ಹಾಗೂ ಆಯ್ಕೆ ಪ್ರಕ್ರಿಯೆ:

* ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳದ ವಿವರಗಳು

* ಇನ್ಸ್‌ಪೆಕ್ಟರ್ : 44,900-1,42,400 ರೂ

* ಸಬ್ ಇನ್ಸ್‌ಪೆಕ್ಟರ್ : 35,400-1,12,400 ರೂ

* ಸಹಾಯಕ ಸಬ್ ಇನ್ಸ್‌ಪೆಕ್ಟರ್ : 29,200-92,300 ರೂ

* ಹೆಡ್ ಕಾನ್ಸ್ಟೇಬಲ್ : 25,500-81,700 ರೂ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವೆಬ್ಸೈಟ್ ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಿ. ಈ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA HQ, CGO ಕಾಂಪ್ಲೆಕ್ಸ್ ಎದುರು, ಲೋಧಿ ರಸ್ತೆ, ನವದೆಹಲಿ-110003 ಈ ವಿಳಾಸಕ್ಕೆ ಸಲ್ಲಿಸಬೇಕು.

Also Read  ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣ ➤ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಕಟೀಲ್

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11-11-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26- 12- 2024

 

error: Content is protected !!
Scroll to Top