ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರವೇ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು. ಈ ಮೂಲಕ ಅನರ್ಹರಿಗೆ ಮಾತ್ರವೇ ಕಾರ್ಡು ರದ್ದುಪಡಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

Also Read  ಸಾಲ ಮನ್ನಾ ಮಾಡಿರುವ ಸಿಎಂ ಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

error: Content is protected !!
Scroll to Top