ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com  ನ. 19.ದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರಇಳಿಕೆಯಾಗಿದ್ದು, ಈ ಕುರಿತಾಗಿ  ಸರ್ಕಾರವು ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಿದ್ದು, ಹೀಗಾಗಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಅಮಾನತುಗೊಳಿಸಬೇಕು. 10 ಮತ್ತು 12 ನೇ ವಿದ್ಯಾರ್ಥಿಗಳ ಶ್ವಾಸಕೋಶವು ಇತರ ವಿದ್ಯಾರ್ಥಿಗಳಿಗಿಂತ ಭಿನ್ನವಾಗಿರಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲಾ ತರಗತಿಗಳನ್ನು ನಿಲ್ಲಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಆನ್‌ಲೈನ್‌ ತರಗತಿಗಳನ್ನು ನಡೆಸಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

Also Read  ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್

error: Content is protected !!
Scroll to Top