ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, . 19. ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ಪೊಲೀಸರ ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .

Also Read  ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

 

error: Content is protected !!
Scroll to Top