ಕುಡಿದ ಮತ್ತಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ: ಹಲವು ವಾಹನಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ರಾಯಚೂರು, . 19. ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಕೆಎಸ್ಸಾರ್ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವ ಘಟನೆ ಲಿಂಗಸಗೂರು ತಾಲೂಕಿನ ಗುರುಗುಂಟ ಹೊರವಲಯದಗೋಲಪಲ್ಲಿ ಸಮೀಪ ಸೋಮವಾರ ತಡರಾತ್ರಿ ನಡೆದಿದೆ.

ಸುರುಪುರ ತಾಲೂಕಿನಿಂದ ಲಿಂಗಸುಗೂರು ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಗಳಿಗೆ ಗೊಲಪಲ್ಲಿ ಗುಡ್ಡದ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಬಂದ ಸುಮಾರು 20 ಯುವಕರ ಗುಂಪು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ನಾಲ್ಕೈದು ಬಸ್‌, ಲಾರಿಗಳ ಗಾಜುಗಳು ಒಡೆದಿವೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು ಎಂದು ತಿಳಿದುಬಂದಿದೆ.

Also Read  ಕೊಕ್ಕಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ➤ ಆರೋಪಿ ಅರೆಸ್ಟ್

 

 

 

error: Content is protected !!
Scroll to Top