(ನ್ಯೂಸ್ ಕಡಬ) newskadaba.com ನ. 19. ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು ಸಂಚಾರ ನಡೆಸಲಿದೆ.
ಈ ಹೊಸ ಸೇವೆಯು ಬೆಂಗಳೂರು ಮತ್ತು ಬೆಳಗಾವಿಯನ್ನು ಸಂಪರ್ಕಿಸಲಿದ್ದು, ಪ್ರಯಾಣಿಕರಿಗೆ ವೇಗ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಆಯ್ಕೆಯನ್ನು ನೀಡುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮುಂದಿನ ತಿಂಗಳು ರೈಲು ಸಂಚಾರ ಆರಂಭಿಸಲಿದೆ ಎಂದು ಘೋಷಿಸಿದ್ದು, ರಾಜ್ಯದ ಸಾರಿಗೆ ಮೂಲಸೌಕರ್ಯಕ್ಕೆ ಮಹತ್ವದ ಹೆಜ್ಜೆ ಇಡಲಿದೆ. ಮೊದಲ ಸ್ಲೀಪರ್ ವಂದೇ ಭಾರತ್ ರೈಲುಗಳ ಟಿಕೆಟ್ ದರಗಳು ರಾಜಧಾನಿ ಎಕ್ಸ್‌ಪ್ರೆಸ್ ದರಗಳಿಗೆ ಸಮನಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
Also Read ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ