ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಅರೆಸ್ಟ್

(ನ್ಯೂಸ್ ಕಡಬ) newskadaba.com  ನ. 19 ಬೆಂಗಳೂರು: ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ನಿರ್ದೇಶಕ ಭರತ್ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ತಾಂಡವ್ ರಾಮ್ ಕೂಡ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ತಾಂಡವ್ ರಾಮ್, ನಿರ್ದೇಶಕ ಭರತ್ ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಭರತ್ ಪೊಲೀಸರಿಗೆ ದೂರು ನೀಡಿದ್ದು, ತಾಂಡವ್ ರಾಮ್ ಅವರನ್ನು ಬಂಧಿಸಲಾಗಿದೆ.

Also Read  ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ

error: Content is protected !!
Scroll to Top