ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, . 19. ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ 2024ರ ನ.17ರಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಪಾದಚಾರಿಗಳಿಗೆ ಗಾಯಗೊಂಡ ಘಟನೆ ನಡೆದಿದೆ.

ಪುತ್ತೂರು ಗ್ರಾಮದ ಆಶೀರ್ವಾದದ ಬಳಿ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಬಾಗಲಕೋಟೆ ಜಿಲ್ಲೆಯ ಜೈನಬಿ ನದಾಫ್ (27) ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಜೈನಬಿಯ ಎಡಗೈ ಮತ್ತು ಕೆನ್ನೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top