ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, . 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ.

ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಭುವನೇಂದ್ರ ಪುದುವೆಟ್ಟು ಅವರು ಕಾರ್ಯ ನಿರ್ವಹಿಸಿದ್ದರು.

Also Read  ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ

 

error: Content is protected !!
Scroll to Top