2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ: ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, . 20. ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರ ಬದುಕು ಎಲ್ಲರಿಗೂ ಆದರ್ಶ. ದೇಶಕ್ಕಾಗಿ ಪ್ರಾಣ ಕೊಟ್ಟ ಅವರನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬಡವರ ಏಳಿಗೆ ಆಗಬೇಕೆಂದರೆ ಶಿಕ್ಷಣ, ರಾಜಕೀಯ, ಆರ್ಥಿಕ ಶಕ್ತಿ, ಸಮಾನ ಅವಕಾಶಗಳನ್ನು ನೀಡಬೇಕು ಎಂದಿದ್ದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಮೂಲಕ ಬಡವರಿಗೆ ಬಾಗಿಲು ತೆಗೆಸಿದರು ಎಂದರು.

Also Read  ಸುಳ್ಯ: ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ - ನಂದಕುಮಾರ್ ಅಭಿಮಾನಿಗಳಿಂದ ಕಡಬ ಮತ್ತು ಸುಳ್ಯದಲ್ಲಿ ಬಹಿರಂಗ ಸಭೆ

error: Content is protected !!
Scroll to Top