’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 20. “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಯ ನೀಡಿದರು.

ಆರ್ಹರ ಬಿಪಿಎಲ್ ಕಾರ್ಡ್‌ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಗಮನ ಸೆಳೆದಾಗ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚು-ಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

Also Read  ಜೀಪು ಪಲ್ಟಿ- ಯುವತಿ ಮೃತ್ಯು

 

error: Content is protected !!
Scroll to Top