ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, . 20. ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳದಿದ್ದಾರೆ.

ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ಹತ್ತಾರು ಮಹತ್ವದ ಕೃತಿಗಳನ್ನು ರಚಿಸಿರುವ ರಾಜಶೇಖರ್ ಅವರ ಅಂತಿಮ ಸಂಸ್ಕಾರ ಉಡುಪಿಯ ಓಂತಿಬೆಟ್ಟುವಿನಲ್ಲಿ ಗುರುವಾರ ನಡೆಯಲಿದೆ.

Also Read  ➤ ಪುತ್ತೂರಿನ ಹನುಮಗಿರಿಗೆ ಆಗಮಿಸಿದ ಗೃಹಸಚಿವ ಅಮಿತ್‌ ಶಾ

 

error: Content is protected !!
Scroll to Top