ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, . 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ.

ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ ಕಟ್ಟಡಗಳಿಗೆ ಬೆಂಕಿ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಾರು ಬೆಂಕಿಗೆ ಆಹುತಿಯಾಗಲು ಕಾರಣ ಏನೆಂಬುದು ತಿಳಿದುಬಂದಿಲ್ಲ. ಇನ್ನು ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Also Read  ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್

 

error: Content is protected !!
Scroll to Top