ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ . 20. ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ  ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ.

ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸುವ ವೇಳೆ ವೇಗವಾಗಿ ಸಾಗಿಸುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಗಿದೆ.

Also Read  ಭರ್ಜರಿ ಏರಿಕೆ ಕಂಡ ಪೆಪ್ಪರ್ - 600ರ ಗಡಿ ದಾಟಿದ ಕಾಳುಮೆಣಸು

error: Content is protected !!
Scroll to Top