ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ.

ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

Also Read  ಪ್ರಧಾನಿ ಮೋದಿಯವರು ದೇಶದಾದ್ಯಂತ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಉದ್ಘಾಟಿಸಿದರು.!  

 

error: Content is protected !!
Scroll to Top