ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

Also Read  ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

 

 

error: Content is protected !!
Scroll to Top