ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ಕಡಿಮೆಯಾಗಿಲ್ಲ ಚಪಲ ➤ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನದ ಆರೋಪಿ ಬಂಧನ

 

 

error: Content is protected !!
Scroll to Top