ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ.

ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

 

error: Content is protected !!
Scroll to Top