ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೀದರ್, ನ. 21. ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ನಗರದ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಕಚೇರಿ ಎದುರು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.


ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ, ಗಣಿತ, ಇಂಗ್ಲಿಷ್ ಸೇರಿದಂತೆ ವಿವಿಧ ವಿಷಯಗಳ ಬೋಧನೆ ಮಾಡಲು ಶಿಕ್ಷಕರ ಕೊರತೆ ಇದೆ ಪ್ರತಿಭಟನಾನಿರತ ಮಕ್ಕಳು ದೂರಿದರು. ಕೂಡಲೇ ಸರಕಾರ ಎಚ್ಚೆತ್ತುಕೊಂಡು ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು.

Also Read  ಕಾಡಾನೆ ಹಾವಳಿ ಹಿನ್ನೆಲೆ ➤ ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

error: Content is protected !!
Scroll to Top