ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುವ ವಿರುದ್ಧ ರಾಜ್ಯಾದ್ಯಂತ ಹೋರಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟವನ್ನು ಆರಂಭಿಸಿದೆ.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಯಿತು.

Also Read  ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

 

 

error: Content is protected !!
Scroll to Top