ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.22. ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ 35 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಸರಗೋಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಘಟನೆ ಗುರುವಾರ ನಡೆದಿದೆ.

ಅಲಂಪಾಡಿ ಹಯರ್ ಸೆಕಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಸಂಜೆ ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಗಿದ್ದು, ಬಳಿಕ ಮನೆಗೆ ಬಂದ ವಿದ್ಯಾರ್ಥಿಗಳು ವಾಂತಿ ಹಾಗೂ ಇನ್ನಿತರ ರೀತಿಯಲ್ಲಿ ಅಸ್ವಸ್ಥತೆ ಕಂಡು ಬಂದಿದೆ.ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ, ಚೆಂಗಳ ಸಹಕಾರಿ ಆಸ್ಪತ್ರೆ ಹಾಗೂ ವಿದ್ಯಾನಗರ, ಕಾಸರಗೋಡು ನಗರದ ವಿವಿಧ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಇನ್ನು ಹಲವು ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Also Read  ಅಭಿವೃದ್ಧಿ ನಿರಂತರವಾದ ಪ್ರಕ್ರಿಯೆ ➤ ಪಿ.ಎಸ್. ಯಡಪಡಿತ್ತಾಯ

error: Content is protected !!
Scroll to Top