ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.22. ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಬಿಡುಗಡೆಗೊಳಿಸಿದರು.

ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕಲಾಪರ್ಬ ಸಹಿತ ವಿವಿಧ ಕಲಾ ಚಟುವಡಿಕೆಗಳಿಗೆ ಪೂರಕವಾಗುವ ಕಾರ್ಯ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಈ ಸಂದರ್ಭ ತಿಳಿಸಿದರು.

Also Read  Big Breaking News ಕಡಬ: ಕಿರುಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು..!!

 

error: Content is protected !!
Scroll to Top