ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಮೂವರು ಪಡ್ಡೆ ಯುವಕರು ಆತನನ್ನು ತಡೆದು ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದಿದ್ದಾರೆ. ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

Also Read  ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಈ ಮೂವರು ಪಡ್ಡೆ ಯುವಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

Also Read  ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು

error: Content is protected !!
Scroll to Top