‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ

(ನ್ಯೂಸ್ ಕಡಬ) newskadaba.comಮಂಗಳೂರು, ನ.22.ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಎಂದು ಅನೇಕ ವರ್ಷಗಳಿಂದ ಹೇಳುತ್ತಿದ್ದೇವೆ ಎಂದರು.

ಇಷ್ಟೆಲ್ಲಾ ಇದ್ದರೂ ಮೋದಿ ಸ್ವಲ್ವವೂ ಬಗ್ಗೆ ಮಾತನಾಡಲ್ಲ. ಅಮಿತ್ ಶಾ ಕಡೆ ಇಡಿ ಇದೆ. ಸಿಬಿಐ ಇದೆ. ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಿಸಿದಾಗ ಇದೆಲ್ಲ ಸುಳ್ಳು ಅಂದರು. ಈಗ ವಿದೇಶದಲ್ಲಿ ಅಕ್ರಮದ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮ ದೇಶದ ಆಸ್ತಿಯನ್ನ ಅದಾನಿಗೆ ಕೊಡುತ್ತಿದ್ದಾರೆ. ಏರ್ಪೋರ್ಟ್, ಪೋರ್ಟ್, ಜಮೀನು ಸೇರಿ ಎಲ್ಲಾ ಅದಾನಿಗೆ ಕೊಡುತ್ತಿದ್ದಾರೆ ಎಂದರು.ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ, ಜಾರ್ಖಂಡ್ ಎರಡು ರಾಜ್ಯಗಳಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎರಡು ರಾಜ್ಯದಲ್ಲಿಯೂ ನಮಗೆ ನಿರೀಕ್ಷೆ ಇದೆ ಎಂದು ಹೇಳಿದರು.

Also Read  ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು

error: Content is protected !!
Scroll to Top