(ನ್ಯೂಸ್ ಕಡಬ)com , ನ.22. ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ; ಆದರೆ, ಸಿದ್ದರಾಮಯ್ಯನವರು ಪಿಟೀಲು ಬಾರಿಸಿಕೊಂಡು ಕುಳಿತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು.
ವಕ್ಫ್ ಮಂಡಳಿಯಿಂದ ರೈತರ ಜಮೀನು ಕಬಳಿಕೆ”ಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಫ್ರೀಡಂ ಪಾರ್ಕ್‍ನಲ್ಲಿ ಇಂದು ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಅವರು ಮಾತನಾಡಿ, ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಏನೂ ಇಲ್ಲ ಎನ್ನುತ್ತಾರೆ. ಹಾಗಿದ್ದರೆ ಏನೂ ಇಲ್ಲದೆ ಹೋರಾಟಗಳು ನಡೆಯುತ್ತಿವೆಯೇ? ಮಠ, ಮಂದಿರಗಳ ಪ್ರಮುಖರೂ ಹೋರಾಟಕ್ಕೆ ಬಂದಿದ್ದಾರೆ. ಬಿಜೆಪಿಯಿಂದ, ರೈತರಿಂದ ಇವತ್ತು ರಾಜ್ಯಾದ್ಯಂತ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಮುಸ್ಲಿಮರ ಓಲೈಕೆ ಮಾಡುತ್ತಾರೆ. ಡಿಜೆ ಹಳ್ಳಿ- ಕೆಜಿಹಳ್ಳಿ, ಹುಬ್ಬಳ್ಳಿ ಕೇಸುಗಳನ್ನು ವಾಪಸ್ ಪಡೆದಿದ್ದಾರೆ ಎಂದು ಟೀಕಿಸಿದರು.