ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, . 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ.

ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ ರೂ.8 ಲಕ್ಷದ ಚೆಕ್ ವಿತರಿಸಿದರು. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಮನವಿಯನ್ನು ಪುರಸ್ಕರಿಸಿ, ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡಿದ ಸರಕಾರಕ್ಕೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಹಾಗೂ ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದ್ದಾರೆ.

Also Read  ನಿತ್ಯ ನಿರಂತರವಾಗಿ ಯೋಗ ಮಾಡಿದರೆ ಆರೋಗ್ಯವಂತರಾಗಬಹುದು ➤ ಕಿರಣ್ ಗೋಗಟೆ

 

error: Content is protected !!
Scroll to Top