ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com . 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ.

ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ಮಠ, ಮಂದಿರ, ಅನ್ನದಾತರ ಜಾಗಕ್ಕೂ ಬೇಲಿ ಹಾಕಿದ ವಕ್ಫ್ ಗೆ ಧಿಕ್ಕಾರ ಎನ್ನುವ ಬಿತ್ತಿ ಫಲಕಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಎದುರಿನ ರಸ್ತೆಯಲ್ಲಿ ಧರಣಿ ಹಮ್ಮಿಕೊಂಡರು.

Also Read  ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ

 

error: Content is protected !!
Scroll to Top