ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ ಹಚ್ಚಿ ಅರೆಸ್ಟ್‌ ಮಾಡಿದ್ದಾರೆ. ಆರೋಪಿಗಳು ಮನ್ಪುರ್‌ ನಿವಾಸಿಗಳಾಗಿದ್ದು ಅವರನ್ನು ಮನೀಶ್‌ ಕುಮಾರ್(‌20) ಮತ್ತು ವಿಕಾಸ್‌ ಕುಮಾರ್‌(20) ಎಂದು ಗುರುತಿಸಲಾಗಿದೆ. ಈ ಹಿಂದೆಯೇ ಇಬ್ಬರ ಮೇಲೂ ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲಿಖಿತ ದೂರಿನ ಆಧಾರದ ಮೇಲೆ ಆರ್‌ಪಿಎಫ್‌ ಪೋಸ್ಟ್‌ ಗಯಾದಲ್ಲಿ ಕಲಂ 153,147 ರೈಲ್ವೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌ ರಾಮಸೇವಕ್‌ ಅವರು ಹೇಳಿದ್ದಾರೆ.

Scroll to Top